varthabharthiಕರ್ನಾಟಕ

ಕುಶಾಲನಗರ-ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ

ವಾರ್ತಾ ಭಾರತಿ : 7 Nov, 2019

ಮಡಿಕೇರಿ,ನ.7 :ಕುಶಾಲನಗರ ಮೈಸೂರು ರಸ್ತೆಯ ಪಟ್ಟಣ ವ್ಯಾಪ್ತಿಯಲ್ಲಿ ಸರಣಿ ವಾಹನ ಅಪಘಾತ ನಡೆದು ಕಾರು ನಜ್ಜುಗುಜ್ಜಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಕುಶಾಲನಗರ ತಾವರೆಕೆರೆ ಬಳಿ ಮಡಿಕೇರಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಹಿಂದಿನಿಂದ ಲಾರಿಯೊಂದು ಢಿಕ್ಕಿಯಾದ ಕಾರಣ ಕಾರು ಮುಂದೆ ಚಲಿಸುತ್ತಿದ್ದ ಸಾರಿಗೆ ಬಸ್‍ಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿಗಳು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.

ಮಡಿಕೇರಿ ಉದ್ಯಮಿ ರಾಜೇಶ್ ಎಂಬವರು ಪತ್ನಿಯೊಂದಿಗೆ ಮೈಸೂರಿಗೆ ತೆರಳುತ್ತಿದ್ದ ಸಂದರ್ಭ ಘಟನೆ ನಡೆದಿದ್ದು, ನಿಧಾನವಾಗಿ ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಇನ್ನೋವ ಕಾರು ಮುಂದೆ ಚಲಿಸುತ್ತಿದ್ದ ಸಾರಿಗೆ ಬಸ್‍ನ ಅಡಿಭಾಗಕ್ಕೆ ನುಗ್ಗಿ ಸಂಪೂರ್ಣ ಜಖಂಗೊಂಡಿದೆ. 

ಕುಶಾಲನಗರ ಸಂಚಾರಿ ಪೊಲೀಸರು ಸಂಚಾರ ಸುಗಮಗೊಳಿಸಿ ಲಾರಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)