ಬಿಎಂಟಿಸಿ ಅಧ್ಯಕ್ಷರಾಗಿ ನಂದೀಶ್ ರೆಡ್ಡಿ ಅಧಿಕಾರ ಸ್ವೀಕಾರ
ಬೆಂಗಳೂರು, ನ.7: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಅಧ್ಯಕ್ಷರಾಗಿ ಮಾಜಿ ಶಾಸಕ ಎನ್.ಎಸ್.ನಂದೀಶ್ ರೆಡ್ಡಿ ಇಂದಿಲ್ಲಿ ಅಧಿಕಾರ ಸ್ವೀಕರಿಸಿದರು.
ಇಲ್ಲಿನ ಶಾಂತಿನಗರದಲ್ಲಿನ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ, ಶಾಸಕ ಎಂ.ಸತೀಶ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದು, ಅಭಿನಂದನೆ ಸಲ್ಲಿಸಿದರು.
ಉಪ ಚುನಾವಣೆಯಲಿ ಸ್ಪರ್ಧಿಸಲು ಉತ್ಸುಕರಾಗಿದ್ದ ನಂದೀಶ್ ರೆಡ್ಡಿ ಟಿಕೆಟ್ ನೀಡುವಂತೆ ಬಿಜೆಪಿ ರಾಜ್ಯನಾಯಕರಿಗೆ ದುಂಬಾಲು ಬಿದ್ದಿದ್ದರು. ಇದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ನಾಯಕರಿಗೆ ತಲೆ ನೋವಾಗಿ ಪರಿಣಮಿಸಿತ್ತು. ಈ ಬಳಿಕ ಸಿಎಂ ಯಡಿಯೂರಪ್ಪ ಹಾಗೂ ಹಿರಿಯ ನಾಯಕರು ಅವರೊಂದಿಗೆ ಮಾತುಕತೆ ನಡೆಸಿ, ಬಿಎಂಟಿಸಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.
Next Story