varthabharthiಕರಾವಳಿ

​ಕಾಂಗ್ರೆಸ್‌ಗೆ ಶಶಿರಾಜ್ ಅಂಬಟ್ ರಾಜೀನಾಮೆ

ವಾರ್ತಾ ಭಾರತಿ : 8 Nov, 2019

ಮಂಗಳೂರು, ನ.8: ದ.ಕ. ಜಿಲ್ಲಾ ಕಾಂಗ್ರೆಸ್ ಮಾಜಿ ವಕ್ತಾರ, ಡಿಸಿಸಿ ಸದಸ್ಯ ಶಶಿರಾಜ್ ಅಂಬಟ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ 35 ವರ್ಷಗಳಿಂದ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತನಾಗಿ ಹಲವಾರು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಆದರೆ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಜಾತಿವಾದಿ ರಾಜಕಾರಣದತ್ತ ಹೊರಳುತ್ತಿದ್ದು, ವಲಸೆ ಕಾಂಗ್ರೆಸಿಗರ ಸೊತ್ತಾಗುತ್ತಿದೆ. ಜಾತ್ಯತೀತ ನಿಲುವಿನ ಕಾರ್ಯಕರ್ತರಿಗೆ ಉಸಿರುಗಟ್ಟಿಸುವ ವಾತಾವರಣವಿರುವುದರಿಂದ ಕೆಲಸ ಮಾಡಲು ಸಾಧ್ಯವಿಲ್ಲದ ಕಾರಣ ಕಾಂಗ್ರೆಸ್ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಿಲ್ಲಾ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ಶಶಿರಾಜ್ ಅಂಬಟ್ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)