varthabharthiಕರಾವಳಿ

​ನ.9: ಗ್ರಂಥಾಲಯಳಿಗೆ ಪುಸ್ತಕಗಳ ಹಸ್ತಾಂತರ

ವಾರ್ತಾ ಭಾರತಿ : 8 Nov, 2019

ಮಂಗಳೂರು, ನ.8: ಮಂಗಳೂರು ವಿಶೇಷ ಆರ್ಥಿಕ ವಲಯದಿಂದ ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗ್ರಂಥಾಲಯ ಹಾಗೂ ಮಂಗಳೂರಿನ ಪತ್ರಿಕಾಭವನದಲ್ಲಿ ಆರಂಭಿಸಲಾಗುವ ಗ್ರಂಥಾಲಯಕ್ಕೆ ಪುಸ್ತಕ ಹಸ್ತಾಂತರ ಕಾರ್ಯಕ್ರಮ ನ.9ರಂದು ಪೂ.11ಕ್ಕೆ ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರು ವಿಶೇಷ ಆರ್ಥಿಕ ವಲಯದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೂರ್ಯನಾರಾಯಣ ಪುಸ್ತಕಗಳನ್ನು ಹಸ್ತಾಂತರ ಮಾಡುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು.

ಮಂಗಳೂರು ವಿಶೇಷ ಆರ್ಥಿಕ ವಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಮಚಂದ್ರ ಭಂಡಾರ್ಕರ್, ದ.ಕ.ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ, ಕುತ್ಲೂರು ಶಾಲಾಭಿವೃದ್ಧಿ ಸಮಿತಿಯ ಸದಸ್ಯ ರಾಮಚಂದ್ರ ಭಟ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ ಅಧ್ಯಕ್ಷ ಕೆ. ಆನಂದ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)