ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ: ಮಹಿಳೆ ಸೇರಿ ಮೂವರು ಮೃತ್ಯು
ಓರ್ವನ ಸ್ಥಿತಿ ಗಂಭೀರ
ಮೈಸೂರು,ನ.8: ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಹೊರವಲಯದ ಮೈಸೂರು- ಟಿ.ನರಸೀಪುರ ರಸ್ತೆಯ ವರಕೋಡು ಬಳಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತಪಟ್ಟವರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಗೃಹ ಪ್ರವೇಶ ಕಾರ್ಯಕ್ರಮಕ್ಕಾಗಿ ಮೈಸೂರಿಗೆ ಆಗಮಿಸಿದ್ದರು. ಕಾರಿನಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಸಂಬಂಧ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story