varthabharthi

ಕರಾವಳಿ

ಮಂಗಳೂರು : ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ವಾರ್ತಾ ಭಾರತಿ : 8 Nov, 2019

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಬೆಂಬಲಿಗರಲ್ಲಿ ಮತ್ತೆ ಕೆಲವರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಪೂಜಾರಿಯವರ ಬೆಂಬಲಿಗರಾಗಿದ್ದ ಹರಿಕೃಷ್ಣ ಬಂಟ್ವಾಳ್ ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿಯೇ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ಬಾರಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ರಾಧಾಕೃಷ್ಣ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದೀಗ ಮತ್ತೆ ಕೆಲವು ಕಾಂಗ್ರೆಸ್ ಪದಾಧಿಕಾರಿಗಳು ಜನಾರ್ದನ ಪೂಜಾರಿಯವರ ಬೆಂಬಲುಗರೆಂದು ಗುರುತಿಸಿಕೊಂಡಿದ್ದ ಮಾಜಿ ಮೇಯರ್ ಪುರಂದರ ದಾಸ್ ಕೂಳೂರು, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಅರುಣ್ ಕುವೆಲ್ಲೋ, ದ.ಕ ಜಿಲ್ಲಾ ಕಾಂಗ್ರೆಸ್‌ನ ಮಾಜಿ ವಕ್ತಾರ ಶಶಿರಾಜ್ ಅಂಬಟ್ ಸೇರಿದಂತೆ ಇತರ ಕಾಂಗ್ರೆಸ್ ಸದಸ್ಯರನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)