ಕರಾಟೆ ಚಾಂಪಿಯನ್ ಶಿಪ್: ಚೈತ್ರಾಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಂಗಳೂರು, ನ.12: ಇತ್ತೀಚಿಗೆ ಮುರುಡೇಶ್ವರದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ನಲ್ಲಿ ನಗರದ ಶ್ರೀ ಚೈತನ್ಯ ಪಿಯು ಕಾಲೇಜಿನ ವಿದ್ಯಾರ್ಥಿನಿ ಎನ್.ಚೈತ್ರಾಶ್ರೀ ಪ್ರಥಮ ಸ್ಥಾನ ಗಳಿಸಿದ್ದಾರೆ.
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಗಳು 2019-20 ರಲ್ಲಿ ಚೈತ್ರಾಶ್ರೀ ಹಾಗೂ ಎನ್ಎಂಕೆಆರ್ವಿ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾಶ್ರೀ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story