113 ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ: ತನಿಖೆ ಕುರಿತು ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ
ಬೆಂಗಳೂರು, ನ.12: ರಾಜ್ಯದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ 87 ಬಾಲಕರು, 26 ಬಾಲಕಿಯರು ಸೇರಿ 113 ಮಕ್ಕಳ ಬಗ್ಗೆ ಇಲ್ಲಿಯವರೆಗೆ ನಡೆಸಿರುವ ತನಿಖೆ ಕುರಿತು ವರದಿ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ನ್ಯಾಯಪೀಠವು ಸುಪ್ರೀಂಕೋರ್ಟ್ ನಿರ್ದೇಶನದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಶೇಷ ಮಕ್ಕಳ ಪೊಲೀಸ್ ಘಟಕಗಳು, ಮಕ್ಕಳ ಕ್ಷೇಮಾಭಿವೃದ್ಧಿ ಪೊಲೀಸ್ ಅಧಿಕಾರಿಗಳಿಗೆ ಬಾಲ ನ್ಯಾಯ ಕಾಯ್ದೆಯ ಗಂಭೀರತೆ ಕುರಿತು ಅರಿವು ಮೂಡಿಸುವ ಜೊತೆಗೆ ಉತ್ತರ ತರಬೇತಿ ನೀಡುವ ಅಗತ್ಯವಿದೆ ಎಂದು ಸರಕಾರಕ್ಕೆ ನಿದೇರ್ಶನ ನೀಡಿತು. ಅಲ್ಲದೆ, ರಾಜ್ಯದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ 113 ಮಕ್ಕಳ ಬಗ್ಗೆ ಇಲ್ಲಿಯವರೆಗೆ ನಡೆಸಿರುವ ತನಿಖೆ ಬಗ್ಗೆ ವರದಿ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.