ನೂಜಿಬಾಳ್ತಿಲ: ದನ ಕಡಿದು ಮಾಂಸ ಮಾಡುತ್ತಿದ್ದ ವೇಳೆ ದಾಳಿ; ಓರ್ವನ ಸೆರೆ
ಕಡಬ, ನ.13. ಮನೆಯ ಹಿಂಬದಿಯ ಶೆಡ್ ವೊಂದರಲ್ಲಿ ಅಕ್ರಮವಾಗಿ ದನವನ್ನು ಕಡಿದು ಮಾಂಸ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ 30 ಕೆ.ಜಿ.ಯಷ್ಟು ಮಾಂಸವನ್ನು ವಶಪಡಿಸಿಕೊಂಡ ಘಟನೆ ಮಂಗಳವಾರ ರಾತ್ರಿ ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ವಿನೋದ್ ಬಂಧಿತ ಆರೋಪಿ. ಇತರ ಇಬ್ಬರು ಆರೋಪಿಗಳಾದ ಬಾವೆ ಶ್ರೀಧರ್, ಪೂಪಿ ಯಾನೆ ಥೋಮಸ್ ಎಂಬವರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೂಜಿಬಾಳ್ತಿಲದಲ್ಲಿ ಅಕ್ರಮವಾಗಿ ದನದ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಡಬ ಎಎಸ್ಐ ರವಿ ಎಂ. ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
Next Story