ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡಗೆ ಜೆಡಿಎಸ್ ಬೆಂಬಲ: ಕುಮಾರಸ್ವಾಮಿ
ವಿಧಾನಸಭೆ ಉಪಚುನಾವಣೆ
ಬೆಂಗಳೂರು, ನ.13: ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರಿಗೆ ಬೆಂಬಲ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ನಡೆಯಲಿರುವ ಹದಿನೈದು ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರಿಗೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.
Next Story