ವಿಧಾನ ಪರಿಷತ್ ಪದವೀಧರ-ಶಿಕ್ಷಕರ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ
ಬೆಂಗಳೂರು, ನ. 14: 2020ರ ಜೂನ್ ತಿಂಗಳಿನಲ್ಲಿ ವಿಧಾನ ಪರಿಷತ್ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಜಾತ್ಯತೀತ ಜನತಾ ದಳ(ಜೆಡಿಎಸ್) ಅಧಿಕೃತವಾಗಿ ಗುರುವಾರ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್.ಚೌಡರೆಡ್ಡಿ ತೂಪಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರ-ಎ.ಪಿ.ರಂಗನಾಥ್, ಪಶ್ಚಿಮ ಪದವೀಧರ ಕ್ಷೇತ್ರ-ಶಿವಶಂಕರ ಕಲ್ಲೂರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಪುರ್ಲೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.
Next Story