ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ: ಆರೋಪಿ ಓಬಳರಾಜು ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು,ನ.14: ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಆರೋಪಿ ಓಬಳರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ಪ್ರಕರಣ ರದ್ದು ಕೋರಿ ಓಬಳರಾಜು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪಿ.ಬಿ.ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಪ್ರಕರಣ ರದ್ದು ಕೋರಿ ಬಂದಿರುವ ಓಬಳರಾಜು ಅವರು ಈ ಮೊದಲು ಮಾಜಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ವಿಶೇಷ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.
2016ರ ಮಾರ್ಚ್ನಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಆದರೆ, ಮಾರ್ಚ್ 21 ಮತ್ತು 31ರಂದು ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಹಗರಣದ ತನಿಖೆಯನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು.
Next Story