varthabharthi


ಕರ್ನಾಟಕ

ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ವಾರ್ತಾ ಭಾರತಿ : 16 Nov, 2019

ಬೆಂಗಳೂರು, ನ.16: ಅನರ್ಹ ಶಾಸಕರ 15 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಅಥಣಿ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಯಾಗಿ ಗಜಾನನ ಮಂಗಸೂಳಿ, ಗೋಕಾಕ್- ಲಖನ್ ಜಾರಕಿಹೊಳಿ, ವಿಜಯನಗರ- ವೆಂಕಟರಾವ್ ಘೋರ್ಪಡೆ, ಶಿವಾಜಿನಗರ- ರಿಝ್ವಾನ್ ಅರ್ಶದ್, ಕೆ.ಆರ್.ಪೇಟೆ- ಕೆ.ಬಿ ಚಂದ್ರಶೇಖರ್, ಕಾಗವಾಡದಲ್ಲಿ ರಾಜು ಕಾಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ. ಯಶವಂತಪುರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಣೆಯಾಗಿಲ್ಲ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)