varthabharthi


ಕರಾವಳಿ

​ಸಾರ್ವಜನಿಕರಿಗೂ ಹೆಲ್ತ್ ಮೀಡಿಯಾ ಕ್ಲಿನಿಕ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ

ವಾರ್ತಾ ಭಾರತಿ : 18 Nov, 2019

ಮಂಗಳೂರು, ನ.18: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್‌ನಿಂದ ‘ಹೆಲ್ತ್ ಮೀಡಿಯಾ ಕ್ಲಿನಿಕ್’ ಯೋಜನೆಯಡಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರ ಉಚಿತ ಅರೋಗ್ಯ ತಪಾಸಣೆ ಹಲವು ತಿಂಗಳಿನಿಂದ ನಡೆಯುತ್ತಿದ್ದು, ಇದನ್ನು ಸಾರ್ವಜನಿಕರಿಗೂ ಮುಂದುವರಿಸಲು ನಿರ್ಧರಿಸಲಾಗಿದೆ.
ಇಂದು ಉದ್ಘಾಟನೆ:  ಉಚಿತ ಆರೋಗ್ಯ ಶಿಬಿರವನ್ನು ನ.19ರಂದು ಬೆಳಗ್ಗೆ 11.15ಕ್ಕೆ ಪತ್ರಿಕಾ ಭವನದಲ್ಲಿ ಲಕ್ಷ್ಮೀ ಮೆಮೊರಿಯಲ್ ಎಜುಕೇಶನ್ ಟ್ರಸ್ಟ್‌ನ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಅಶೋಕ್ ಹೆಗ್ಡೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ವಹಿಸಲಿದ್ದಾರೆ.
ಮೀಡಿಯಾ ಹೆಲ್ತ್ ಕ್ಲಿನಿಕ್‌ನಲ್ಲಿ  ಇಂದಿನಿಂದ ಪ್ರತಿ ತಿಂಗಳ ಎರಡನೇ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಇದರ ಪ್ರಯೋಜವನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು.

ಈಗಾಗಲೇ 200 ಕ್ಕೂ ಹೆಚ್ಚು ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರು ಅರೋಗ್ಯ ತಪಾಸಣೆ ಮಾಡಿರುತ್ತಾರೆ.
ತಪಾಸಣೆ ವಿವರ: ರಕ್ತ ತಪಾಸಣೆ, ಬಿಪಿ, ಇಸಿಜಿ ಪರೀಕ್ಷೆ, ಡಯಾಬಿಟೀಸ್ ಸೇರಿದಂತೆ ಅರೋಗ್ಯದಲ್ಲಿ ಸಮಸ್ಯೆಗಳಿದ್ದಲ್ಲಿ ವೈದ್ಯರೊಂದಿಗೆ ಸಮಾಲೋಚನೆ ಮಾಡಬಹುದಾಗಿದೆ. ಮಹಿಳೆಯರಿಗೆ ತಜ್ಞ  ವೈದ್ಯೆ ರಿಂದ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಪತ್ರಕರ್ತರು ಹಾಗೂ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದೆಂದು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)