varthabharthi


ಕರ್ನಾಟಕ

ಮಂಡ್ಯ: ಭೀಕರ ರಸ್ತೆ ಅಪಘಾತಕ್ಕೆ ಐವರು ಬಲಿ; ಮೂವರ ಸ್ಥಿತಿ ಗಂಭೀರ

ವಾರ್ತಾ ಭಾರತಿ : 21 Nov, 2019

ಮಂಡ್ಯ, ನ.21: ಟಾಟಾ ಸುಮೊ ಮತ್ತು ಟೆಂಪೊ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಾಗಮಂಗಲ ತಾಲೂಕಿನ ದೊಡ್ಡಜಟಕ ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. 

ನಾಗಮಂಗಲ ಕಡೆಯಿಂದ ಬೆಳ್ಳೂರು ಕ್ರಾಸ್ ಕಡೆಗೆ ಹೋಗುತ್ತಿದ್ದ ಟಾಟಾ ಸುಮೊಗೆ ನಾಗಮಂಗಲ ಕಡೆಗೆ ಬರುತ್ತಿದ್ದ ಟೆಂಪೊ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಟಾಟಾ ಸುಮೊ ನುಜ್ಜು ಗುಜ್ಜಾಗಿದ್ದು, ಸುಮೋದಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಘಟನೆಯಲ್ಲಿ ಟೆಂಪೊ ಚಾಲಕ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದು, ಘಟನೆ ಬಗ್ಗೆ ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)