varthabharthi


ಬೆಂಗಳೂರು

ರಾಜ್ಯಸಭಾ ಸ್ಥಾನದ ಬಗ್ಗೆ ಡಿ.5ಕ್ಕೆ ಅಂತಿಮ ಘೋಷಣೆ: ಚುನಾವಣಾಧಿಕಾರಿ ವಿಶಾಲಾಕ್ಷಿ

ವಾರ್ತಾ ಭಾರತಿ : 2 Dec, 2019

ಬೆಂಗಳೂರು, ಡಿ. 2: ರಾಜ್ಯಸಭೆ ಉಪಚುನಾವಣೆಗೆ ಈವರೆಗೂ ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಸೇರಿದಂತೆ ಮೂವರು ನಾಮಪತ್ರ ಸಲ್ಲಿಸಿದ್ದು, ನಾಳೆ(ಡಿ.3) ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಅಸಮರ್ಪಕವಾಗಿದ್ದರೆ ಅಂತವರ ಉಮೇದುವಾರಿಕೆ ತಿರಸ್ಕರಿಸಲಾಗುತ್ತದೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಮಪತ್ರ ಹಿಂಪಡೆಯಲು ಡಿ.5ಕ್ಕೆ ಕೊನೆಯ ದಿನ. ಅಂದು ಅಂತಿಮ ರಾಜ್ಯಸಭಾ ಸ್ಥಾನದ ಬಗ್ಗೆ ಘೋಷಣೆ ಮಾಡಲಿದ್ದೇವೆ ಎಂದು ಇದೇ ವೇಳೆ ವಿವರ ನೀಡಿದರು.

ನಾಮಪತ್ರ ಸಲ್ಲಿಸುವ ಅಭ್ಯರ್ಥಿ 10 ಮಂದಿ ಅನುಮೋದಕರಾಗಿ ಶಾಸಕರು ಸಹಿ ಹಾಕುವುದು ಕಡ್ಡಾಯ. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಿಗೆ ಅನುಮೋದಕರಾಗಿ ಯಾರೂ ಸಹಿ ಹಾಕಿಲ್ಲ. ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿಗೆ ಹತ್ತು ಮಂದಿ ಅನುಮೋದಕರು ಸಹಿ ಹಾಕಿದ್ದಾರೆ ಎಂದು ತಿಳಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)