varthabharthi


ಕ್ರೀಡೆ

ಟ್ವೆಂಟಿ-20: ವಿಂಡೀಸ್‌ಗೆ 8 ವಿಕೆಟ್‌ಗಳ ಭರ್ಜರಿ ಗೆಲುವು

ವಾರ್ತಾ ಭಾರತಿ : 8 Dec, 2019

ತಿರುವನಂತಪುರ, ಡಿ.8: ಆತಿಥೇಯ ಭಾರತ ವಿರುದ್ಧ ಪ್ರವಾಸಿ ವೆಸ್ಟ್‌ಇಂಡೀಸ್ ತಂಡ ರವಿವಾರ ಇಲ್ಲಿ ನಡೆದ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ.

ಗೆಲುವಿಗೆ 171 ರನ್‌ಗಳ ಸವಾಲನ್ನು ಪಡೆದ ವಿಂಡೀಸ್ ತಂಡ 18.3 ಓವರ್‌ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 173 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರೊಂದಿಗೆ ವಿಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

ವೆಸ್ಟ್‌ಇಂಡೀಸ್‌ನ ಆರಂಭಿಕ ಬ್ಯಾಟ್ಸ್‌ಮನ್ ಲೆಂಡ್ಲ್ ಸಿಮೊನ್ಸ್ ಔಟಾಗದೆ 67 ರನ್(45ಎ, 4ಬೌ,4ಸಿ), ಎವಿನ್ ಲೆವಿಸ್ 40 ರನ್(35ಎ, 3ಬೌ,3ಸಿ), ಶಿಮ್ರ್‌ನ್ ಹೆಟ್ಮಯೆರ್ 23 ರನ್ ಮತ್ತು ನಿಕೊಲಾಸ್ ಪೂರನ್ ಔಟಾಗದೆ 38 ರನ್(18ಎ, 4ಬೌ, 2ಸಿ) ತಂಡದ ಗೆಲುವಿಗೆ ನೆರವಾದರು.

ಭಾರತದ ಬೌಲರ್‌ಗಳ ದುರ್ಬಲ ದಾಳಿಯ ಪ್ರಯೋಜನೆ ಪಡೆದ ವಿಂಡೀಸ್‌ನ ಬ್ಯಾಟ್ಸ್‌ಮನ್‌ಗಳು ಸುಲಭವಾಗಿ ಗೆಲುವಿನ ದಡ ಸೇರಿದರು.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 170 ರನ್ ಗಳಿಸಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)