5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆ
ನಾಗಪುರ, ಡಿ. 5: ಮಹಾರಾಷ್ಟ್ರದ ನಾಗಪುರ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ 5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕಲ್ಲಿನಿಂದ ತಲೆಗೆ ಜಜ್ಜಿ ಹತ್ಯೆಗೈದ 32 ವರ್ಷದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 6ರಂದು ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ನಾಗಪುರದಿಂದ 25 ಕಿ.ಮೀ. ದೂರದಲ್ಲಿರುವ ಕಮಲೇಶ್ವರ್ ತಾಲೂಕಿನ ಲಿಂಗಾ ಗ್ರಾಮದ ಹೊಲವೊಂದರಲ್ಲಿ ಪತ್ತೆಯಾಗಿತ್ತು.
ಬಂಧಿತ ಆರೋಪಿಯನ್ನು ಸಂಜಯ್ ಪುರಿ ಎಂದು ಗುರುತಿಸಲಾಗಿದೆ. ಈತ ಜಿಲ್ಲೆಯ ಮೋಹ್ಗಾಂವ್ ಗ್ರಾಮದ ನಿವಾಸಿ. ಬಾಲಕಿಯ ಹೆತ್ತವರೊಂದಿಗೆ ಈತ ಹೊಲದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ನಾಗಪುರ ಗ್ರಾಮೀಣದ ಪೊಲೀಸ್ ಅಧೀಕ್ಷಕ ರಾಕೇಶ್ ಓಲಾ ತಿಳಿಸಿದ್ದಾರೆ.
ಸಂಜಯ್ ಪುರಿಯ ವಿರುದ್ಧ ಪೋಸ್ಕೊ ಅಡಿಯಲ್ಲಿ ಪ್ರಕರಣ ದಾಖಲಿಸಿ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆತನಿಗೆ ಡಿಸೆಂಬರ್ 13ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
Next Story