ಸೋನಿಯಾಗೆ ಜನ್ಮ ದಿನದ ಶುಭಾಷಯ ಕೋರಿದ ಪ್ರಧಾನಿ
ಹೊಸದಿಲ್ಲಿ, ಡಿ. 9: ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜನ್ಮ ದಿನವಾದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಷಯ ಕೋರಿದ್ದಾರೆ.
‘‘ಸೋನಿಯಾ ಗಾಂಧಿ ಅವರಿಗೆ ಜನ್ಮ ದಿನದ ಶುಭಾಷಯಗಳು. ಅವರಿಗೆ ದೇವರು ಆಯುರಾರೋಗ್ಯ ನೀಡಲಿ’’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. 73 ವರ್ಷಕ್ಕೆ ಕಾಲಿಟ್ಟಿರುವ ಸೋನಿಯಾ ಗಾಂಧಿ ಅವರಿಗೆ ಕಾಂಗ್ರೆಸ್ ನಾಯಕರು ಕೂಡ ಜನ್ಮ ದಿನದ ಶುಭಾಷಯ ಕೋರಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಘಟನೆಗಳು ಹಾಗೂ ಮಹಿಳಾ ಭದ್ರತೆ ಬಗ್ಗೆ ಹೆಚ್ಚುತ್ತಿರುವ ಕಳವಳದ ಹಿನ್ನೆಲೆಯಲ್ಲಿ ಜನ್ಮ ದಿನಾಚರಣೆ ಆಚರಿಸದಿರಲು ಸೋನಿಯಾ ಗಾಂಧಿ ನಿರ್ಧರಿಸಿದ್ದರು.
Next Story