ಕರ್ನಾಟಕ ಉಸ್ತುವಾರಿ ಹುದ್ದೆಗೆ ವೇಣುಗೋಪಾಲ್ ರಾಜೀನಾಮೆ?
ಹೊಸದಿಲ್ಲಿ, ಡಿ.10: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಎರಡು ಸ್ಥಾನ ಗೆಲ್ಲಲು ಶಕ್ತವಾದ ಹಿನ್ನೆಲೆಯಲ್ಲಿ ಕರ್ನಾಟಕದ ಉಸ್ತುವಾರಿ ಕೆಸಿ ವೇಣುಗೋಪಾಲ್ ಮಂಗಳವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಿಗೇ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದೀಗ ವೇಣುಗೋಪಾಲ್ ಕೂಡ ರಾಜೀನಾಮೆ ಸಲ್ಲಿಸಿದ್ದು, ಡಿ.14ರಂದು ಹೊಸ ಉಸ್ತುವಾರಿ ನೇಮಕ ಆಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
Next Story