ಸಿಕ್ಸರ್ ನಲ್ಲಿ ಮತ್ತೊಂದು ಮೈಲುಗಲ್ಲು ತಲುಪಿದ ರೋಹಿತ್ ಶರ್ಮಾ
ಮುಂಬೈ, ಡಿ.11: ರೋಹಿತ್ ಶರ್ಮಾ ಅಂತರ್ರಾಷ್ಟ್ರೀಯ ಕ್ರಿಕೆಟ್ನಲ್ಲಿ 400 ಸಿಕ್ಸರ್ ಸಿಡಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.
ವಾಂಖೆಡೆ ಸ್ಟೇಡಿಯಂನಲ್ಲಿ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ವೆಸ್ಟ್ಇಂಡೀಸ್ ವಿರುದ್ಧ ಮೂರನೇ ಹಾಗೂ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.
3ನೇ ಓವರ್ನಲ್ಲಿ ಶೆಲ್ಡಾನ್ ಕಾಟ್ರೆಲ್ರ ಎಸೆತದಲ್ಲಿ ಸಿಕ್ಸರ್ ಎತ್ತುವ ಮೂಲಕ ಶರ್ಮಾ ನೂತನ ದಾಖಲೆ ಬರೆದರು.
ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೂರನೇ ಆಟಗಾರ. ವೆಸ್ಟ್ಇಂಡೀಸ್ನ ಸ್ಪೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಗರಿಷ್ಠ ಸಿಕ್ಸರ್ ಸಿಡಿಸಿರುವ ಆಟಗಾರರ ಪೈಕಿ ಅಗ್ರಸ್ಥಾನದಲ್ಲಿದ್ದಾರೆ. ಅವರು ಅಂತರ್ರಾಷ್ಟ್ರೀಯ ಕ್ರಿಕೆಟ್ನಲ್ಲಿ 534 ಸಿಕ್ಸರ್ ಸಿಡಿಸಿದ್ದರು. ಪಾಕಿಸ್ತಾನದ ಆಲ್ರೌಂಡರ್ ಶಾಹಿದ್ ಅಫ್ರಿದಿ ವೃತ್ತಿ ಬದುಕಿನಲ್ಲಿ 476 ಸಿಕ್ಸರ್ ಜಮೆ ಮಾಡಿದ್ದಾರೆ.
Next Story