ಕ್ರಿಕೆಟ್ ಬೆಟ್ಟಿಂಗ್ : 11 ಮಂದಿಯನ್ನು ಬಂಧಿಸಿದ ದಿಲ್ಲಿ ಪೊಲೀಸರು
ಹೊಸದಿಲ್ಲಿ, ಜ.20: ಭಾರತ-ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯದ ವೇಳೆ ರವಿವಾರ ರಾಜಧಾನಿಯಲ್ಲಿ ಬೆಟ್ಟಿಂಗ್ ದಂಧೆ ನಡೆಸಿದ್ದ 11 ಆರೋಪಿಗಳನ್ನು ದಿಲ್ಲಿ ಕ್ರೈಂ ಬ್ರಾಂಚ್ ನ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಪೊಲೀಸರು 70 ಮೊಬೈಲ್ ಫೋನ್, ಎರಡು ಟಿವಿ ಮತ್ತು ಏಳು ಲ್ಯಾಪ್ ಟಾಪ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಅಂತರದಲ್ಲಿ ಜಯ ಗಳಿಸಿತ್ತು. ಭಾರತ ಸರಣಿಯನ್ನು 2-1ರಿಂದ ವಶಪಡಿಸಿಕೊಂಡಿತು. ಸುಮಾರು 2 ಕೋಟಿ ರೂ. ಮೊತ್ತದ ಬೆಟ್ಟಿಂಗ್ ನಡೆದಿದೆ ಎಂದು ಪೊಲಿಸರು ಗುಮಾನಿ ವ್ಯಕ್ತಪಡಿಸಿದ್ದಾರೆ.
Next Story