varthabharthi

ರಾಷ್ಟ್ರೀಯ

ನಿತ್ಯಾನಂದನ ಪತ್ತೆಗಾಗಿ ಇಂಟರ್ ಪೋಲ್ ನಿಂದ 'ಬ್ಲೂ ಕಾರ್ನರ್' ನೋಟಿಸ್

ವಾರ್ತಾ ಭಾರತಿ : 22 Jan, 2020

ಹೊಸದಿಲ್ಲಿ: ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ವಿವಾದಿತ ದೇವಮಾನವ ನಿತ್ಯಾನಂದನನ್ನು ಪತ್ತೆ ಹಚ್ಚಲು ಇಂಟರ್ ಪೋಲ್ 'ಬ್ಲೂ ಕಾರ್ನರ್' ನೋಟಿಸ್ ಜಾರಿಗೊಳಿಸಿದೆ.

ಈ ಮಾಹಿತಿಯನ್ನು ಗುಜರಾತ್ ಪೊಲೀಸರು ಸ್ಥಳೀಯ ನ್ಯಾಯಾಲಯದಲ್ಲಿ ನಿತ್ಯಾನಂದನ ಪ್ರಕರಣ ಕುರಿತಂತೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ನೀಡಿದ್ದಾರೆ. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ  ನಿತ್ಯಾನಂದನ ಅಹ್ಮದಾಬಾದ್ ಆಶ್ರಮದಿಂದ ಇಬ್ಬರು ಬಾಲಕಿಯರು ನಾಪತ್ತೆಯಾದ ನಂತರ ಆತನ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

ಬ್ಲೂ ಕಾರ್ನರ್ ನೋಟಿಸನ್ನು ಈ ತಿಂಗಳು ಜಾರಿಗೊಳಿಸಲಾಗಿದೆ ಎಂದು ಅಹ್ಮದಾಬಾದ್ ಡಿವೈಎಸ್ಪಿ ಕೆ.ಟಿ. ಕಮರಿಯ ಹೇಳಿದ್ದಾರೆ. ನಿತ್ಯಾನಂದನ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತಾಗಲು  ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾವುದೇ ಪ್ರಕರಣದ ಆರೋಪಿ ಎಲ್ಲಿದ್ದಾನೆಂದು ಪತ್ತೆ ಹಚ್ಚಲು ಹಾಗೂ ಈ ಕುರಿತು ಮಾಹಿತಿ ಸಂಗ್ರಹಿಸಲು ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗುತ್ತದೆಯಾದರೆ ಆರೋಪಿಯ ಬಂಧನಕ್ಕಾಗಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗುತ್ತದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)