varthabharthi

ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣ : ಪೊಲೀಸರಿಂದ ವರದಿ ಕೇಳಿದ ರಾಜ್ಯ ಸರಕಾರ

ವಾರ್ತಾ ಭಾರತಿ : 23 Jan, 2020

ಮಂಗಳೂರು:  ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣ ಸಂಬಂಧಪಟ್ಟಂತೆ ಕೂಡಲೇ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೂಚನೆ ನೀಡಿದೆ.

ಶುಕ್ರವಾರ ಮಧ್ಯಾಹ್ನದ ಒಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ರಾಜ್ಯ ಸರ್ಕಾರ ಕಳುಹಿಸಲಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಘಟನೆಗೆ ಸಂಬಂಧಪಟ್ಟಂತೆ ಹಲವಾರು ಊಹಾಪೋಹಗಳು ಎದ್ದಿದ್ದವು. ಈಗ ಪ್ರಕರಣ ತಿರುವು ಪಡೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ  ಮಧ್ಯಂತರ ವರದಿ ಕೇಳಿದೆ ಎಂದು ತಿಳಿದುಬಂದಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)