ಮುಹಮ್ಮದ್ ರಫೀಕ್
ಮಂಗಳೂರು, ಜ.28: ನಗರದ ಕುದ್ರೋಳಿ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮುಹಮ್ಮದ್ ರಫೀಕ್ (59) ಸೋಮವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ರಿಯಲ್ ಎಸ್ಟೇಟ್ ವ್ಯವಹಾರದಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪಕ್ಕೆ ತೆರಳಿದ್ದ ಮುಹಮ್ಮದ್ ರಫೀಕ್ ಅಲ್ಲೇ ಹೃದಯಾಘಾತಕ್ಕೊಳಗಾದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಆಗಲೇ ಕೊನೆಯುಸಿರೆಳೆದಿರುವ ಬಗ್ಗೆ ಅಲ್ಲಿನ ವೈದ್ಯರು ಘೋಷಿಸಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story