varthabharthi


ನಿಧನ

ಗುರುರಾಜ ಭಟ್

ವಾರ್ತಾ ಭಾರತಿ : 4 Feb, 2020

ಉಡುಪಿ, ಫೆ.4: ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರೂ, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ ಪೋಷಕರೂ ಆದ ಗುಂಡಿಬೈಲು ನಿವಾಸಿ ವಕ್ವಾಡಿ ಗುರುರಾಜ ಭಟ್ಟರು ಇಂದು ನಿಧನರಾದರು. ಅವರಿಗೆ 86 ವರ್ಷ ಪ್ರಾಯವಾಗಿದ್ದು, ಪತ್ನಿಯನ್ನು ಅಗಲಿದ್ದಾರೆ.

ಕಡಿಯಾಳಿ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ ಅವಧಿಗೆ ಅಧ್ಯಾಪಕ ಹಾಗೂ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದ ಗುರುರಾಜ್ ಭಟ್, ನಿವೃತ್ತಿಯ ಬಳಿಕ ಶಾಲಾ ಆಡಳಿತ ಮಂಡಳಿಯ ಸಂಚಾಲಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಭಟ್ಟರ ನಿಧನಕ್ಕೆ ಸೋದೆ ಮಠದ ಶ್ರೀವಿಶ್ವವಲ್ಲಭ ತೀರ್ಥರು ಹಾಗೂ ಶಾಸಕ ಕೆ.ರಘುಪತಿ ಭಟ್ ಸಂತಾಪ ವ್ಯಕ್ತಪಡಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)