varthabharthi


ಕರಾವಳಿ

ಫೋಕ್ಸೊ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ

ವಾರ್ತಾ ಭಾರತಿ : 13 Feb, 2020

ಉಡುಪಿ, ಫೆ. 13: ತಾಲೂಕಿನ ಕಲ್ಯಾಣಪುರ ಸಂತೆಕಟ್ಟೆ ಸಮೀಪದ ನೇಜಾರಿನಲ್ಲಿ ಒಂದೂವರೆ ವರ್ಷ ಹಿಂದೆ ನಡೆದ ಮೂರು ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ ಗುರುವಾರ 20 ವರ್ಷಗಳ ಕಠಿಣ ಸಜೆ ಹಾಗೂ 10,000 ರೂ ದಂಡ ವಿಧಿಸಿ ಆದೇಶ ನೀಡಿದೆ.

ನೇಜಾರು ನಿವಾಸಿ ಪಳನಿ (65) 2018ರ ಅ. 3ರಂದು ಅಂಗನವಾಡಿಗೆ ಹೋಗುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾಧಿಕಾರಿಯಾಗಿದ್ದ ಸೀತಾರಾಮ ಅವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ವಾದ, ವಿವಾದವನ್ನು ಆಲಿಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾ. ಸಿ.ಎಂ. ಜೋಶಿ ಅವರು ಆರೋಪಿ ಮೇಲಿನ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ನೀಡುವಂತೆ ಆದೇಶಿಸಿ ಗುರುವಾರ ತೀರ್ಪು ನೀಡಿದ್ದಾರೆ.

ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ರಾಘವೇಂದ್ರ ವೈ.ಟಿ. ವಾದ ಮಂಡಿಸಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)