varthabharthi


ಕರಾವಳಿ

ಯೋಧರ ಬಲಿದಾನದ ಕಥನಗಳು ಮಕ್ಕಳಿಗೆ ತಿಳಿಸಿ: ಶಾಸಕ ಕಾಮತ್

ವಾರ್ತಾ ಭಾರತಿ : 14 Feb, 2020

ಮಂಗಳೂರು : ಪುಲ್ವಾಮ ದುರ್ಘಟನೆಗೆ ಒಂದು ವರ್ಷ ಸಂದ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಕದ್ರಿ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಅವರು, ನಮ್ಮೆಲ್ಲರ ಸುಖ ನಿದ್ರೆಯ ಹಿಂದೆ ನಿದ್ದೆಗೆಟ್ಟು ಗಡಿ ಕಾಯುವ ಯೋಧರ ಪರಿಶ್ರಮವಿದೆ. ಅವರ ನಿಸ್ವಾರ್ಥ ಸೇವೆಗೆ ಗೌರವ ಸಲ್ಲಿಸುವ ಮೂಲಕ ಯೋಧರ ಜೊತೆ ನಾವಿದ್ದೇವೆ ಎನ್ನುವ ಸಂದೇಶ ನೀಡಬೇಕು. ಪುಲ್ವಾಮದಲ್ಲಿ ಹುತಾತ್ಮರಾದ ಎಲ್ಲಾ ಯೋಧರನ್ನೂ ನೆನೆಯುವುದು ನಮ್ಮ ಕರ್ತವ್ಯ ಎಂದಿದ್ದಾರೆ.

ನಮ್ಮ ಮಕ್ಕಳಿಗೆ ದೇಶಾಭಿಮಾನ, ತ್ಯಾಗ ಬಲಿದಾನದ ಕಥನಗಳನ್ನು ತಿಳಿಸಿ ಬೆಳೆಸಬೇಕು. ಮಕ್ಕಳ ಮನಸ್ಸಿನಲ್ಲಿ ರಾಷ್ಟ್ರೀಯ ಭಾವನೆಗಳನ್ನು ತುಂಬುವ ಕಾರ್ಯ ಕಡಿಮೆಯಾದರೆ ಈ ದೇಶಕ್ಕೆ ಭವಿಷ್ಯವಿಲ್ಲ. ಪ್ರತಿಯೊಂದು ಮಗುವಿಗೂ ಕೂಡ ಭಾರತದ ಬಗೆಗಿನ ಅಭಿಮಾನವನ್ನು ತಿಳಿಸಿಕೊಟ್ಟು ಭವ್ಯ ಭಾರತದ ನಿರ್ಮಾಣಕ್ಕೆ ಎಳೆಯ ವಯಸ್ಸಿನಲ್ಲಿಯೇ ಬುನಾದಿ ಹಾಕಿಕೊಡಬೇಕು ಎಂದರು.

ಈ ಸಂಧರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯರಾದ ಶಕಿಲಾ ಕಾವಾ, ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಹಿಂದೂ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಆರ್ ಶೆಟ್ಟಿ, ಜ್ಞಾನ ಸಂಜೀವಿನಿ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)