varthabharthi

ನಿಧನ

ಮುಹಮ್ಮದ್ ಮಾಸ್ಟರ್ ಆಚಾರಿಬೆಟ್ಟು

ವಾರ್ತಾ ಭಾರತಿ : 28 Feb, 2020

ಮಂಗಳೂರು, ಫೆ.28: ಆಚಾರಿಬೆಟ್ಟು ನಿವಾಸಿ ಹಾಜಿ ಮುಹಮ್ಮದ್ ಮಾಸ್ಟರ್(88) ಗುರುವಾರ ಸಂಜೆ ನಿಧನರಾಗಿದ್ದಾರೆ. ಜಿಲ್ಲೆಯ ವಿವಿಧ ಸರಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿದ್ದ ಇವರು ಅರಳ (ಮುಲರಪಟ್ಣ) ಶ್ರೀ ಚಂದ್ರನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ನಿವೃತ್ತರಾಗಿದ್ದರು.
ಮೃತರು ನಾಲ್ವರು ಪುತ್ರರು, ನಾಲ್ವರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರವು ಶುಕ್ರವಾರ ಪೂರ್ವಾಹ್ನ 11ಕ್ಕೆ ಮುಲರಪಟ್ಣ ಕೇಂದ್ರ ಜುಮಾ ಮಸೀದಿಯ ದಫನ ಭೂಮಿಯಲ್ಲಿ ನಿರ್ವಹಿಸಲಾಯಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)