ಚೀನಾ: ಕೊರೋನವೈರಸ್ ಸಾವಿನ ಸಂಖ್ಯೆ 2,788ಕ್ಕೆ
ಬೀಜಿಂಗ್, ಫೆ. 28: ಚೀನಾದಲ್ಲಿ ಕೊರೋನವೈರಸ್ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 2,788ಕ್ಕೆ ಏರಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 44 ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅದೇ ವೇಳೆ, ಚೀನಾದಲ್ಲಿ ಕೊರೋನವೈರಸ್ ಸೋಂಕು ಪೀಡಿತರ ಒಟ್ಟು ಸಂಖ್ಯೆ 79,000ವನ್ನು ಸಮೀಪಿಸಿದೆ.
ಹೊಸದಾಗಿ ಸಂಭವಿಸಿರುವ ಸಾವುಗಳ ಪೈಕಿ, 41 ಸೋಂಕಿನ ಅತ್ಯಧಿಕ ಬಾಧೆಗೆ ಒಳಗಾಗಿರುವ ಹುಬೈ ಪ್ರಾಂತದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಶುಕ್ರವಾರ ತಿಳಿಸಿದೆ.
ಜಾಗತಿಕ ಮಟ್ಟದಲ್ಲಿ ಕೊರೋನವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2,800ನ್ನು ದಾಟಿದೆ ಹಾಗೂ 83,000ಕ್ಕೂ ಅಧಿಕ ಮಂದಿ ಸೋಂಕಿಗೊಳಗಾಗಿದ್ದಾರೆ.
Next Story