varthabharthi


ಸಿನಿಮಾ

'ಮೀಟೂ' ಪ್ರಕರಣದಲ್ಲಿ ಹಾಲಿವುಡ್ ನಿರ್ಮಾಪಕ ಹಾರ್ವೆ ವೈನ್ ಸ್ಟೈನ್ ಗೆ 23 ವರ್ಷ ಜೈಲು

ವಾರ್ತಾ ಭಾರತಿ : 11 Mar, 2020

ನ್ಯೂಯಾರ್ಕ್ : ಅಮೆರಿಕದಲ್ಲಿ 'ಮೀಟೂ ಚಳವಳಿ'ಯ ಆರಂಭಕ್ಕೆ ಕಾರಣವಾದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಲಿವುಡ್ ನ ಪ್ರಸಿದ್ಧ ನಿರ್ಮಾಪಕ ಹಾರ್ವೆ ವೈನ್ ಸ್ಟೈನ್ ಗೆ 23 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಲಾಗಿದೆ.

ಆರೋಪಿಗೆ 29 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವಂತೆ ಪ್ರಾಸಿಕ್ಯೂಟರ್ ಮ್ಯಾನ್ ಹಾಟನ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು, 67 ವರ್ಷಗಳ ವೈನ್ ಸ್ಟೈನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಮನಗಂಡು ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸಲಾಯಿತು.

ಜೈಲು ಶಿಕ್ಷೆಯ ಅವಧಿಯನ್ನು 5 ವರ್ಷಗಳಿಗೆ ಸೀಮಿತಗೊಳಿಸುವಂತೆ ವೈನ್ ಸ್ಟೈನ್ ಪರ ವಕೀಲರು ಮನವಿ ಮಾಡಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)