varthabharthi

ಕರ್ನಾಟಕ

ರಾಜ್ಯ ಸರಕಾರದ ಆದೇಶ

9 ಜಿಲ್ಲೆಗಳು ಮಾತ್ರವಲ್ಲ ರಾಜ್ಯಾದ್ಯಂತ ಲಾಕ್‌ ಡೌನ್ !

ವಾರ್ತಾ ಭಾರತಿ : 23 Mar, 2020

ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.23: ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾ.31ರವರೆಗೆ ರಾಜ್ಯಾದ್ಯಂತ ಲಾಕ್‌ಡೌನ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

"ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್-19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24/03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ . ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ" ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)