varthabharthi


ಬೆಂಗಳೂರು

ಮಾ.24ರಿಂದ ಎ.6ರವರೆಗೆ ಹೈಕೋರ್ಟ್‌ಗೆ ರಜೆ

ವಾರ್ತಾ ಭಾರತಿ : 23 Mar, 2020

ಬೆಂಗಳೂರು, ಮಾ.23: ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮಾ.24ರಿಂದ ಎ.6ರವರೆಗೆ ಹೈಕೋರ್ಟ್‌ಗೆ ರಜೆ ಘೋಷಿಸಲಾಗಿದೆ ಎಂದು ಸಿಜೆ ಸೂಚನೆ ಮೇರೆಗೆ ರಿಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದ್ದಾರೆ.

ತುರ್ತು ಪ್ರಕರಣಗಳ ವಿಚಾರಣೆಗಾಗಿ ಮಾ.24 ಹಾಗೂ 26ರ ಬೆಳಗ್ಗೆ 11 ರಿಂದ ಮಧ್ಯಾಹ್ನ 12.30ರವರೆಗೆ ಮಾತ್ರ ವಿಶೇಷ ಕೋರ್ಟ್‌ನಲ್ಲಿ ಕಲಾಪ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಾ.24ರಿಂದ ಎ.6ರವರೆಗೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಹಾಗೂ ಅಧೀನ ನ್ಯಾಯಾಲಯಗಳಿಗೆ ರಜೆಯನ್ನು ಘೋಷಿಸಲಾಗಿದೆ. ಆದರೆ, ಸೋಮವಾರ ಹೊರಡಿಸಿದ ಅಧಿಸೂಚನೆಯಂತೆ ಧಾರವಾಡ ಮತ್ತು ಕಲಬುರಗಿ ವಿಶೇಷ ಕೋರ್ಟ್‌ಗಳ ಕಲಾಪ ಮಾ.24ರಂದು ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)