varthabharthi

ಕರ್ನಾಟಕ

ಕೊರೋನ ಶಂಕಿತ ಆಸ್ಪತ್ರೆಯಿಂದ ರಾತ್ರೋರಾತ್ರಿ ಪರಾರಿ

ವಾರ್ತಾ ಭಾರತಿ : 23 Mar, 2020

ಕಲಬುರಗಿ, ಮಾ.23: ಮಹಾರಾಷ್ಟ್ರ ರಾಜ್ಯದ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವ ರಾತ್ರೋರಾತ್ರಿ ಆಸ್ಪತ್ರೆಯಿಂದ ನಾಪತ್ತೆಯಾಗಿ ಆಳಂದ ತಾಲೂಕಿನ ಹಿತ್ತಲಶಿರೂರ ಗ್ರಾಮದಲ್ಲಿ ಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.

ಪುಣೆ ಸಮೀಪದ ಹಿತ್ತಲಶಿರೂರು ಗ್ರಾಮದ ವ್ಯಕ್ತಿ ಪರಾರಿಯಾಗಿದ್ದ. ಈತ ಕಾರು ಚಾಲಕನಾಗಿದ್ದು, ಕೊರೋನ ವೈರಸ್ ಶಂಕೆ ವ್ಯಕ್ತವಾದ ಬೆನ್ನಲ್ಲೇ, ಆಸ್ಪತ್ರೆಯಿಂದ ಪರಾರಿಯಾಗಿದ್ದ ಎಂದು ಹೇಳಲಾಗುತ್ತಿದೆ.

ಸೋಮವಾರ ಮದ್ಯ ಸೇವನೆ ಮಾಡಿದ್ದ ಈತ, ಸುಮಾರು 40 ಜನ ಪರಿಚಯಸ್ಥರನ್ನು ಭೇಟಿಯಾಗಿದ್ದಾನೆ. ಪುಣೆಯಲ್ಲಿರುವ ಸ್ನೇಹಿತರು ಕರೆ ಮಾಡಿ ಊರಿನವರಿಗೆ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಅನುಮಾನಗೊಂಡ ಗ್ರಾಮಸ್ಥರು ಆಳಂದ ತಾಲೂಕಿನ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ವ್ಯಕ್ತಿಯನ್ನು ವಶಕ್ಕೆ ಪಡೆದು ಕಲಬುರಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)