varthabharthi

ಕರ್ನಾಟಕ

ಮಿಮ್ಸ್ ಆಸ್ಪತ್ರೆಯಲ್ಲಿದ್ದ ವ್ಯಕ್ತಿಗೆ ಕೊರೋನ ನೆಗೆಟಿವ್: ಮಂಡ್ಯ ಜಿಲ್ಲಾಧಿಕಾರಿ ಡಾ.ವೆಂಕಟೇಶ್

ವಾರ್ತಾ ಭಾರತಿ : 24 Mar, 2020

ಮಂಡ್ಯ, ಮಾ.24: ಬೆಸಗರಹಳ್ಳಿ ನಿವಾಸಿಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ರಕ್ತ ಹಾಗೂ ಕಫವನ್ನು ಪರೀಕ್ಷೆಗೆ ಮೈಸೂರಿಗೆ ಕಳುಹಿಸಲಾಗಿತ್ತು. ಮಂಗಳವಾರ ಬಂದ ರಿಪೋರ್ಟ್ ಕಾರ್ಡ್ ನಲ್ಲಿ ನೆಗೆಟಿವ್ ಬಂದಿದ್ದು ಕೊರೋನ ವೈರಸ್ ಪಾಸಿಟಿವ್ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೋನ ಪ್ರಕರಣ ಹರಡದಂತೆ ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮವಹಿಸಿರುತ್ತದೆ. ಜಿಲ್ಲೆಗೆ ವಿದೇಶದಿಂದ 105 ಮಂದಿ ಬಂದಿದ್ದು, ಇವರನ್ನು ಹೋಂ ಕ್ವಾರಂಟೈನ್‍ನಲ್ಲಿ ಇಡಲಾಗಿದೆ. ಕೊರೋನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ ವಿಪತ್ತು ನಿರ್ವಹಣಾ ಕೊಠಡಿಯ ದೂರವಾಣಿ ಸಂಖ್ಯೆ 08232-224655 ಅಥವಾ ಉಚಿತ ಕರೆಗಾಗಿ ದೂರವಾಣಿ ಸಂಖ್ಯೆ -1077ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)