ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಮಹಿಳೆಯ ವಿರುದ್ಧ ಎಫ್ಐಆರ್
ಸಾಂದರ್ಭಿಕ ಚಿತ್ರ
ಬೆಂಗಳೂರು, ಮಾ.24: ಕೊರೋನ ವೈರಸ್ ಹಿನ್ನೆಲೆ ಮನೆಯಲ್ಲಿಯೇ ಇದ್ದು ನಿಗಾವಹಿಸುವಂತೆ ಸೂಚಿಸಿ ಕೈ ಮೇಲೆ ಮುದ್ರೆ ಹಾಕಿದ್ದರೂ, ಸಾರ್ವಜನಿಕವಾಗಿ ಓಡಾಟ ನಡೆಸಿ, ಕೆಲ ಅಂಗಡಿಗಳಿಗೆ ಭೇಟಿ ನೀಡಿ ವ್ಯಾಪಾರ ನಡೆಸಿರುವ ಆರೋಪದಡಿ ಮಹಿಳೆಯೊಬ್ಬರ ಮೇಲೆ ಇಲ್ಲಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಇತ್ತೀಚೆಗೆ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯ ಕೈಯಲ್ಲಿ ಹೋಂ ಕ್ವಾರಂಟೈನ್ ಮುದ್ರೆ ಇತ್ತು. ಮನೆಯಲ್ಲಿ ಇರಬೇಕಾದ ಮಹಿಳೆ ಮನೆಯಿಂದ ಹೊರಗೆ ಬಂದು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದ್ದರು. ಈ ಬಗ್ಗೆ ಮಾಹಿತಿ ಸಂಗ್ರಹಿಸಿ, ಆರೋಪಿ ಮಹಿಳೆ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story