varthabharthi

ಕರಾವಳಿ

ಲಾಕ್ ಡೌನ್ : ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರಿಗೆ ಫುಡ್ ಕಿಟ್

ವಾರ್ತಾ ಭಾರತಿ : 25 Mar, 2020

ಮಂಗಳೂರು : ಕೊರೋನ ವೈರಸ್ ಭೀತಿಯಿಂದ ಲಾಕ್ ಡೌನ್ ಪರಿಣಾಮ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಭಾಗಿತ್ವದಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ ಫುಡ್ ಕಿಟ್ ವ್ಯವಸ್ಥೆ ಮಾಡಲಾಗಿದೆ.

ಇದರಲ್ಲಿ 25 ಕೆ ಜಿ ಕುಚ್ಚಲು ಅಕ್ಕಿ ಹಾಗೂ  5 ಕೆಜಿ ಗೋಧಿ ಹುಡಿ ಇರುತ್ತದೆ ಅಲ್ಲದೆ ಫೇಸ್ ಮಸ್ಕ್ ಕೂಡಾ ನೀಡಲಾಗುತ್ತದೆ. ನಾಳೆಯಿಂದ  ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ಗಂಟೆಯೊಳಗೆ ಮಂಗಳೂರು ಪ್ರೆಸ್ ಕ್ಲಬ್ ನಿಂದ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಮಂಗಳೂರು ಪ್ರೆಸ್ ಕ್ಲಬ್ ಮ್ಯಾನೇಜರ್ ಅಭಿಷೇಕ್ ಮೊ.9738519840 ಅವರನ್ನು ಸಂಪರ್ಕ ಮಾಡಬಹುದಾಗಿದೆ. ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಆಯಾ ತಾಲೂಕು (ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ, ಉಪ್ಪಿನಂಗಡಿ, ವಿಟ್ಲ, ಮುಲ್ಕಿ) ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)