varthabharthi

ರಾಷ್ಟ್ರೀಯ

ಭಾರತದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ

ವಾರ್ತಾ ಭಾರತಿ : 25 Mar, 2020

ಹೊಸದಿಲ್ಲಿ, ಮಾ.25: ಭಾರತದಲ್ಲಿ ಕೊರೋನ ವೈರಸ್-ಪಾಸಿಟಿವ್ ಪ್ರಕರಣಗಳ ಸಂಖ್ಯೆ 606 ಕ್ಕೆ ಏರಿದ್ದು, ಇದುವರೆಗೆ ವೈರಸ್ ಸೋಂಕಿತರ ಪೈಕಿ  42 ರೋಗಿಗಳು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

 ಈ ವರೆಗೆ  ಕೊರೋನ ವೈರಸ್ ನ  ಯಾವುದೇ ಸಮುದಾಯ ಪ್ರಸರಣ ನಡೆದಿಲ್ಲ ಎಂದು  ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಐದು ಹೊಸ ಕೊರೋನ ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ದಲ್ಲಿಯ  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಅವುಗಳಲ್ಲಿ ಒಂದು ವಿದೇಶಿ ಪ್ರಯಾಣದ ಇತಿಹಾಸವನ್ನು ಹೊಂದಿದೆ. "ಈಗ, ದೆಹಲಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 35 ಕ್ಕೆ ಏರಿದೆ" ಎಂದು ಅವರು ಹೇಳಿದರು.

ಕೊರೋನ ವೈರಸ್ ನಿಂದ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿದೆ.

.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)