ರಾಜ್ಯದ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರ
ಬೆಂಗಳೂರು, ಮಾ.25: ರಾಜ್ಯದಲ್ಲಿ ಕೊರೋನ ವೈರಸ್ ಪೀಡಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, ಇಂದು ಒಂದೇ ದಿನ 10 ಜನರಲ್ಲಿ ಕೊರೋನ ವೈರಸ್ ದೃಢಪಟ್ಟಿದೆ. ಈ ಮೂಲಕ ಕೊರೋನ ವೈರಸ್ ಪೀಡಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಾರ್ಚ್ 24ರ ಸಂಜೆ 5ರಿಂದ ಮಾರ್ಚ್ 25ರ ಬೆಳಗ್ಗೆ 11 ಗಂಟೆಯ ಅವಧಿಯಲ್ಲಿ ಹೊಸದಾಗಿ 10 ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದ ವಿವಿಧೆಡೆ 47 ರೋಗಿಗಳು ಪ್ರತ್ಯೇಕ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಈವರೆಗೆ ಪತ್ತೆಯಾಗಿರುವ 51 ಪ್ರಕರಣಗಳ ಪೈಕಿ 6 ಪ್ರಕರಣಗಳು ಕೇರಳ ಮೂಲದವರಿಗೆ ಸಂಬಂಧಿಸಿದ್ದಾಗಿದೆ. ವಿದೇಶಗಳಿಂದ ಕರ್ನಾಟಕದ ವಿಮಾನ ನಿಲ್ದಾಣಗಳಿಗೆ ಆಗಮಿಸಿದ್ದ ಅವರು, ರಾಜ್ಯದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
Next Story