varthabharthi


ಕರ್ನಾಟಕ

ಕೊರೋನ ವಿರುದ್ಧ ಹೋರಾಡಲು ದೇಣಿಗೆ ನೀಡಿ: ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಮನವಿ

ವಾರ್ತಾ ಭಾರತಿ : 25 Mar, 2020

ಬೆಂಗಳೂರು, ಮಾ.25: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ದಿನೇದಿನೇ ಹೆಚ್ಚಳವಾಗುತ್ತಿದ್ದು, ಕೊರೋನ ವೈರಸ್ ವಿರುದ್ಧ ಹೋರಾಡಲು ಸರ್ಕಾರದೊಂದಿಗೆ ಕೈಜೋಡಿಸಲು ಇಚ್ಛಿಸುವ ದಾನಿಗಳು ದೇಣಿಗೆ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, "ಸಹೃದಯಿ ನಾಗರಿಕರಲ್ಲಿ ಮನವಿ...ಕೊರೋನ ಸೋಂಕಿನ ವಿರುದ್ಧದ ನಿರ್ಣಾಯಕ ಹೋರಾಟದಲ್ಲಿ ಸಹೃದಯಿ ನಾಗರಿಕರು 'ಮುಖ್ಯಮಂತ್ರಿಗಳ ಪರಿಹಾರ ನಿಧಿ' ಗೆ ಉದಾರವಾಗಿ ದೇಣಿಗೆ ನೀಡುವ ಮೂಲಕ ಭಾಗಿಗಳಾಗಲು ವಿನಂತಿಸುತ್ತೇನೆ' ಎಂದು ಮನವಿ ಮಾಡಿದ್ದಾರೆ.

ದೇಣಿಗೆ ನೀಡಬೇಕಾದ ಖಾತೆಯ ವಿವರ

Name: CHIEF MINISTER RELIEF FUND COVID-19

Bank Name: STATE BANK OF INDIA,

Branch: VIDHANASOUDHA BRANCH

A/c No. 39234923151

IFSC CODE: SBIN0040277

MICR- 560002419

ಡಿಡಿ ಅಥವಾ ಚೆಕ್ ಕಳುಹಿಸಲು: ನಂ. 235-ಎ, 2ನೇ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂಗಳೂರು-560001 ಇಲ್ಲಿಗೆ ಕಳುಹಿಸಬಹುದು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)