varthabharthi

ಕರಾವಳಿ

ಸಂಸದರ ನಿಧಿಯಿಂದ ಕೊರೋನ ವಿರುದ್ಧ ಹೋರಾಟಕ್ಕೆ ಒಂದು ಕೋಟಿ ರೂ. ನೆರವು : ನಳಿನ್ ಕುಮಾರ್

ವಾರ್ತಾ ಭಾರತಿ : 26 Mar, 2020

ಮಂಗಳೂರು : ಕೊರೋನ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯ ಸಜ್ಜಾಗಿದೆ. ಈ ನಿಟ್ಟಿನಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮಾರಕ ರೋಗದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಕೈಗೊಳ್ಳುವ ಕಾರ್ಯಗಳಿಗೆ ನಿಯಮಾನುಸಾರ ವಿನಿಯೋಗಿಸಲು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಇವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ 1 ಕೋಟಿ ರೂ. ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೀಡಿದ್ದಾರೆ.

ನಿಯಮಾನುಸಾರ ಹಣದ ಉಪಯೋಗಕ್ಕೆ ತಿಳಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)