ಕಾಸರಗೋಡು : ಲಾಕ್ ಡೌನ್ ಆದೇಶ ಉಲ್ಲಂಘನೆ; 44 ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
ಕಾಸರಗೋಡು : ಲಾಕ್ ಡೌನ್ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ 44 ಪ್ರಕರಣಗಳನ್ನು ದಾಖಲಿಸಲಾಗಿದೆ.
ಕಾಸರಗೋಡು, ಮಂಜೇಶ್ವರ, ಕುಂಬಳೆ, ಬದಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಕೇರಳದಲ್ಲಿ ಇದುವರೆಗೆ 118 ಕೊರೋನ ಸೋಂಕಿತರನ್ನು ಪತ್ತೆಹಚ್ಚಲಾಗಿದ್ದು, ಈ ಪೈಕಿ 112 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಕಾಸರಗೋಡು ಜಿಲ್ಲೆಯಲ್ಲಿ 41 ಮಂದಿ ಚಿಕಿತ್ಸೆಯಲ್ಲಿದ್ದು, ಮೂವರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
Next Story