varthabharthi

ಬೆಂಗಳೂರು

ಎಪ್ರಿಲ್ 20ರ ಬಳಿಕ ಎಸೆಸೆಲ್ಸಿ ಪರೀಕ್ಷೆ ದಿನಾಂಕದ ಬಗ್ಗೆ ನಿರ್ಧಾರ: ಶಿಕ್ಷಣ ಇಲಾಖೆ

ವಾರ್ತಾ ಭಾರತಿ : 26 Mar, 2020

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊರೊನಾವೈರಸ್ ಭೀತಿಯ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನು ಈಗಾಗಲೇ ಮುಂದೂಡಲಾಗಿದ್ದು, ಪರೀಕ್ಷಾ ದಿನಾಂಕವನ್ನು ಎಪ್ರಿಲ್ 20ರ ಬಳಿಕ ನಿರ್ಧರಿಸಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಕಟನೆ ತಿಳಿಸಿದೆ.

ಎ.15ರವರೆಗೆ ಲಾಕ್ ಡೌನ್ ಮುಂದುವರಿಯಲಿದ್ದು, 7ರಿಂದ 9ನೆ ತರಗತಿ ಪರೀಕ್ಷೆಗಳನ್ನು , ಎಸೆಸೆಲ್ಸಿ ಪರೀಕ್ಷೆಗಳನ್ನು, ಆರ್ ಟಿಇ ಅಡಿಯಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಗಳು ಹಾಗು ಶಾಲೆಗಳಲ್ಲಿ 2020-21ನೆ ಸಾಲಿಗೆ ದಾಖಲಾತಿ ಪ್ರಕ್ರಿಯೆಗಳನ್ನು ಎಪ್ರಿಲ್ 20ರವರೆಗೆ ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.  

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)