varthabharthi

ಬೆಂಗಳೂರು

ಸಿಎಂ ಪರಿಹಾರ ನಿಧಿಗೆ 200 ಕೋಟಿ ರೂ. ದೇಣಿಗೆ ನೀಡಿದ ಸರಕಾರಿ ನೌಕರರು

ವಾರ್ತಾ ಭಾರತಿ : 26 Mar, 2020

ಬೆಂಗಳೂರು, ಮಾ.26: ಕೊರೋನ ತಡೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯ ಸರಕಾರಿ ನೌಕರರು ಒಂದು ದಿನದ ವೇತನವನ್ನು ನೀಡಿದ್ದು ಒಟ್ಟು 200 ಕೋಟಿ ರೂ.ದೇಣಿಗೆ ನೀಡಿದ್ದಾರೆ.

ಕೊರೋನ ತಡೆಗೆ ಸಾರ್ವಜನಿಕರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಉದಾರ ದೇಣಿಗೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ ಬೆನ್ನಲ್ಲೆ ರಾಜ್ಯ ಸರಕಾರಿ ನೌಕರರು ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಿದ್ದಾರೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ತಿಳಿಸಿದ್ದಾರೆ.

ರಾಜ್ಯ ಸರಕಾರಿ ನೌಕರರ ಒಂದು ದಿನದ ವೇತನ ಸುಮಾರು 200 ಕೋಟಿ ರೂ.ನಷ್ಟು ಆಗಲಿದ್ದು ಸಂಪೂರ್ಣ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವ ಬಗ್ಗೆ ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯದಲ್ಲಿ ಅತಿವೃಷ್ಟಿಯಾದಾಗಲೂ ನೌಕರರ ಸಂಘ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿತ್ತು ಎಂದು ಹೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)