varthabharthi

ಸಿನಿಮಾ

ಕೊರೋನ ಲಾಕ್ ಡೌನ್

25 ಸಾವಿರ ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ಸಹಾಯ ನೀಡಲು ಮುಂದೆ ಬಂದ ಸಲ್ಮಾನ್ ಖಾನ್

ವಾರ್ತಾ ಭಾರತಿ : 29 Mar, 2020

ಹೊಸದಿಲ್ಲಿ: ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲೋಯೀಸ್ (ಎಫ್ ಡಬ್ಲ್ಯುಐಸಿಇ) ನ 25 ಸಾವಿರ ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ಸಹಾಯ ನೀಡಲು ಬಾಲಿವುಡ್ ನಟ ಸಲ್ಮಾನ್ ಖಾನ್  ಮುಂದೆ ಬಂದಿದ್ದಾರೆ.

ಸಲ್ಮಾನ್ ಖಾನ್ ರ ಬೀಯಿಂಗ್ ಹ್ಯೂಮನ್ ಫೌಂಡೇಶನ್ ನೇರವಾಗಿ ಈ ಮೊತ್ತವನ್ನು ಕಾರ್ಮಿಕರ ಖಾತೆಗೆ ಜಮಾ ಮಾಡಲಿದೆ ಎಂದು ತಿಳಿದುಬಂದಿದೆ. ದಿನಗೂಲಿ ಕಾರ್ಮಿಕರ ಹೆಸರು ಮತ್ತು ಬ್ಯಾಂಕ್ ಖಾತೆಯ ಮಾಹಿತಿಯನ್ನು ಸಲ್ಮಾನ್ ಖಾನ್ ಕೇಳಿದ್ದಾರೆ ಎಂದು ಎಫ್ ಡಬ್ಲ್ಯುಐಸಿಇ ಅಧ್ಯಕ್ಷ ಬಿ.ಎನ್. ತಿವಾರಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)