varthabharthiಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಸಹಾಯಕನಿಗೆ ಕೊರೋನ ವೈರಸ್ ದೃಢ

ವಾರ್ತಾ ಭಾರತಿ : 30 Mar, 2020

ಜೆರುಸಲೇಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಹಾಯಕರೊಬ್ಬರಲ್ಲಿ ಕೊರೋನ ವೈರಸ್ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಬೆಂಜಮಿನ್ ನೆತನ್ಯಾಹು ಅವರಿಗೆ ಈ ಸೋಂಕು ತಗಲಿದೆಯೇ ಎನ್ನುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭಿಸಿಲ್ಲ.

"ಆರೋಗ್ಯ ಸಚಿವಾಲಯದ ನಿರ್ದೇಶನದಂತೆ ನಾವು ಕ್ರಮ ಕೈಗೊಳ್ಳುತ್ತೇವೆ" ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸಹಾಯಕನಲ್ಲಿ ಕೊರೋನವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ನೆತನ್ಯಾಹು ಅವರು 14 ದಿನಗಳ ಕ್ವಾರಂಟೈನ್ ನಲ್ಲಿರಬೇಕಾಗಬಹುದು.

ನೆತನ್ಯಾಹು ಮತ್ತು ವಿಪಕ್ಷದ ನಾಯಕರು ಭಾಗಿಯಾಗಿದ್ದ ಸಂಸತ್ತಿನ ಅಧಿವೇಶನದಲ್ಲಿ ಈ ಸಹಾಯಕ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)