ನಿಝಾಮುದ್ದೀನ್ ಮಸೀದಿಯ ಪ್ರಾರ್ಥನೆಯಲ್ಲಿ ಬೆಳಗಾವಿಯ 10 ಮಂದಿ ಭಾಗಿ
ಬೆಳಗಾವಿ, ಮಾ.31: ದೆಹಲಿಯ ನಿಝಾಮುದ್ದೀನ್ ಪ್ರದೇಶದಲ್ಲಿರುವ ಬಾಂಗ್ಲವಾಲಿ ಮಸೀದಿಯಲ್ಲಿ ನಡೆದಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಬೆಳಗಾವಿಯ 10 ಮಂದಿ ಪಾಲ್ಗೊಂಡಿದ್ದರು ಎನ್ನಲಾಗಿದ್ದು, ಅವರನ್ನು ಪತ್ತೆ ಹಚ್ಚಿ ನಿಗಾ ವಹಿಸಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಡಳಿತ ತಿಳಿಸಿದೆ.
ಮಾರ್ಚ್ 13 ರಿಂದ 15ರವರೆಗೆ ನಿಝಾಮುದ್ದೀನ್ನಲ್ಲಿರುವ ಬಾಂಗ್ಲಾವಲಿ ಮಸೀದಿಯಲ್ಲಿ ಧಾರ್ಮಿಕ ಸಮ್ಮೇಳನ ಆಯೋಜಿಸಿದ್ದು, ಇದರಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಅದರಲ್ಲಿ ಬೆಳಗಾವಿಯ 10 ಮಂದಿ ಪಾಲ್ಗೊಂಡಿದ್ದರು ಎಂಬ ಮಾಹಿತಿಯನ್ನು ಕಲೆ ಹಾಕಿ, ಪತ್ತೆ ಹಚ್ಚಿದ ತಕ್ಷಣವೇ ಜಿಲ್ಲಾಡಳಿತ ಅವರನ್ನು ಬೇರೆಡೆಗೆ ಸ್ಥಳಾಂತರಿಸಿದೆ.
ಇಂದು ಈ 10 ಮಂದಿಯ ರಕ್ತದ ಸ್ಯಾಂಪಲ್ ಹಾಗೂ ಗಂಟಲು ದ್ರವವನ್ನು ಪಡೆದು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಈ 10 ಮಂದಿಯ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.
Next Story