varthabharthi



ಬೆಂಗಳೂರು

ಕೊರೋನ ಪರಿಹಾರ ನಿಧಿಗೆ ಕನಿಷ್ಠ 1 ಲಕ್ಷ ರೂ. ದೇಣಿಗೆ ನೀಡಲು ಕಾಂಗ್ರೆಸ್ ಶಾಸಕರು, ಸಂಸದರಿಗೆ ಸಿದ್ದರಾಮಯ್ಯ ಮನವಿ

ವಾರ್ತಾ ಭಾರತಿ : 1 Apr, 2020

ಬೆಂಗಳೂರು, ಎ.1: ಕೆಪಿಸಿಸಿ ಆರಂಭಿಸಿರುವ ಕೊರೋನ ಪರಿಹಾರ ನಿಧಿಗೆ ವೈಯಕ್ತಿಕವಾಗಿ ತಲಾ ಕನಿಷ್ಠ ಒಂದು ಲಕ್ಷ ರೂ. ದೇಣಿಗೆಯಾಗಿ ನೀಡುವಂತೆ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಕೊರೋನ ವೈರಸ್ ರಾಜ್ಯದ ಜನತೆಯನ್ನು ತೀವ್ರ ಸಂಕಷ್ಟಕ್ಕೀಡು ಮಾಡಿದೆ. ಇದರಿಂದಾಗಿ ದುಡಿಯುವ ವರ್ಗಕ್ಕೆ ಉದ್ಯೋಗಗಳಿಲ್ಲದೆ ಆಹಾರ, ನೀರು, ಔಷಧಿಗಳಿಗೆ ಪರದಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಮೊದಲೇ ಪ್ರವಾಹದಿಂದ ನಲುಗಿದ್ದ ನಾಡಿನ ರೈತ, ಕೂಲಿ ಕಾರ್ಮಿಕರನ್ನೂ ಸಹ ಈ ವೈರಸ್ ಕಂಗೆಡುವಂತೆ ಮಾಡಿದೆ. ಈ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳೆರಡೂ ಸನ್ನಿವೇಶವನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿತ್ತು. ಆದರೆ ಎರಡೂ ಸರ್ಕಾರಗಳಿಂದ ಪರಿಹಾರ ಕಾರ್ಯ ಸೂಕ್ತವಾಗಿ ನಡೆಯುತ್ತಿಲ್ಲ. ಈ ಸಂದರ್ಭದಲ್ಲಿ ನಾವೆಲ್ಲರೂ ಜನ ಕಂಗೆಡದಂತೆ ಅವರ ಜೊತೆ ನಿಂತು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಆದ್ದರಿಂದ ನಮ್ಮ ಪಕ್ಷದ ಶಾಸಕರು, ಸಂಸದರು ವೈಯಕ್ತಕವಾಗಿ ತಲಾ  ಕನಿಷ್ಠ ಒಂದು ಲಕ್ಷ ರೂ. ದೇಣಿಗೆ ನೀಡುವಂತೆ ಕೋರುತ್ತೇನೆ ಹಾಗೂ ತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದುಕೊಂಡು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ಶಾಸಕರಿಗೆ ಸಿದ್ದರಾಮಯ್ಯ  ಮನವಿ ಮಾಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)