varthabharthiಕರಾವಳಿ

ನಿಝಾಮುದ್ದೀನ್ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ 28 ಮಂದಿ ಭಾಗಿ

ವಾರ್ತಾ ಭಾರತಿ : 1 Apr, 2020

ಮಂಗಳೂರು, ಎ.1: ದಿಲ್ಲಿಯ ಮರ್ಕಝ್ ನಿಝಾಮುದ್ದೀನ್‌ನ ಧಾರ್ಮಿಕ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ 28 ಮಂದಿ ಭಾಗಿಯಾಗಿದ್ದು, ಆ ಪೈಕಿ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಯ ಕ್ವಾರಂಟೈನ್ ನಲ್ಲಿಡಲಾಗಿದೆ ಎಂದು ತಿಳಿದುಬಂದಿದೆ.

ಉಳಿದ 26 ಮಂದಿ ಯಾರು, ಎಲ್ಲಿಯವರು ಎಂಬುದರ ತಲಾಶೆಯಲ್ಲಿ ಕೊರೋನ ಜಿಲ್ಲಾ ನೋಡಲ್ ಅಧಿಕಾರಿ ನೇತೃತ್ವದ ವೈದ್ಯರ ತಂಡವು ಪೊಲೀಸರ ಸಹಕಾರದಲ್ಲಿ ತೊಡಗಿಸಿಕೊಂಡಿವೆ. ಎಲ್ಲರನ್ನೂ ಪತ್ತೆ ಹಚ್ಚಿ ವೈದ್ಯಕೀಯ ತಪಾಸಣೆಗೊಳಪಡಿಸಲಾಗುವುದು. ಗಂಟಲ ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಮತ್ತು ವರದಿಯ ಆಧಾರದಲ್ಲಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)