varthabharthiರಾಷ್ಟ್ರೀಯ

ಭಾರತದಲ್ಲಿ ಕೊರೋನ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 1,637ಕ್ಕೆ ಏರಿಕೆ

ವಾರ್ತಾ ಭಾರತಿ : 1 Apr, 2020

ಹೊಸದಿಲ್ಲಿ, ಎ.1: ಭಾರತದಲ್ಲಿ ಕೊರೋನ ವೈರಸ್ ಸೋಂಕು  ಪ್ರಕರಣಗಳು ತೀವ್ರವಾಗಿ ಏರಿಕೆಯಾಗಿದ್ದು, ಪ್ರಕರಣಗಳ ಸಂಖ್ಯೆ   1,637 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಇಂದು ಪ್ರಕಟಿಸಿದೆ.

 ಒಂದೇ ದಿನದಲ್ಲಿ 240 ಪ್ರಕರಣಗಳು  ಪತ್ತೆಯಾಗಿದೆ.  ಇನ್ನೂ ಮೂರು ಸಾವುಗಳು ದೃಢ ಪಟ್ಟಿದ್ದರಿಂದ ಕೋವಿಡ್ -19  ಸಾವಿನ ಸಂಖ್ಯೆ 38ಕ್ಕೆ ಏರಿದೆ.

ಕೋಬ್ವಿಡ್ -19 ಹಾಟ್‌ಸ್ಪಾಟ್ ಎಂದು ಗುರುತಿಸಲಾಗಿರುವ ದಿಲ್ಲಿಯ  ನಿಝಾಮುದ್ದೀನ್‌ನಲ್ಲಿ ನಡೆದ ತಬ್ಲೀ-ಎ-ಜಮಾಅತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೂವತ್ತು ಜನರನ್ನು ಪುಣೆಯಲ್ಲಿ ಕ್ಯಾರೆಂಟೈನ್ ನಲ್ಲಿ ಇರಿಸಲಾಗಿದೆ. ವೈದ್ಯರೊಬ್ಬರಿಗೆ ಕೊರೋನ ವೈರಸ್ ಪೊಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ದಿಲ್ಲಿ ಕ್ಯಾನ್ಸರ್ ಆಸ್ಪತ್ರೆಗೆ ಬೀಗ ಜಡಿಯಲಾಗಿದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)